Search This Blog
Thursday, 10 November 2022
ನಿಟ್ಟೆ ತಾಂತ್ರಿಕ ಕಾಲೇಜಿನಲ್ಲಿ ಕೋಟಿ ಕಂಠ ಗಾಯನ
ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ೬೭ ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ 'ಕೋಟಿ ಕಂಠ ಗಾಯನ - ನನ್ನ ನಾಡು ನನ್ನ ಹಾಡು' ಅಭಿಯಾನವನ್ನು ನಡೆಸಲು ಉದ್ದೇಶಿಸಿದ ತರುವಾಯ ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯವು ಅಕ್ಟೋಬರ್ 28 ರಂದು ಬೆಳಗ್ಗೆ 11 ಗಂಟೆಯಿಂದ 11:30 ರವರೆಗೆ ಸರ್ಕಾರದ ಆದೇಶಾನುಸಾರ ೬ ಕನ್ನಡ ಹಾಡುಗಳನ್ನು ಹಾಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.
ಸಂಸ್ಥೆಯ ಸ್ಟೀರಿಯೋ ಕ್ಲಬ್ ನ ನೇತೃತ್ವದಲ್ಲಿ ನಾಡಗೀತೆಯಾದ ಜಯ ಭಾರತ ಜನನಿಯ ತನುಜಾತೆ, ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಬಾರಿಸು ಕನ್ನಡ ಡಿಂಡಿಮವ, ಹಚ್ಚೇವು ಕನ್ನಡದ ದೀಪ, ವಿಶ್ವವಿನೂತನ ವಿದ್ಯಾಚೇತನ ಹಾಗೂ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಎಂಬ ಆರು ಹಾಡುಗಳನ್ನ ಅಧ್ಯಾಪಕರು, ಭೋದಕೆತರ ವರ್ಗ ಹಾಗೂ ವಿದ್ಯಾರ್ಥಿಗಳು ಒಡಗೂಡಿ ಸುಮಾರು 3000 ಸಂಖ್ಯೆಯಷ್ಟು ಮಂದಿ ಹಾಡಿದರು.
Subscribe to:
Post Comments (Atom)
No comments:
Post a Comment
Note: only a member of this blog may post a comment.